ರಾಜ್ಯ ಸರ್ಕಾರವು 5151 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರದ ನಾನಾ ಇಲಾಖೆಗಳಲ್ಲಿ (Government Job) ಬಾಕಿ ಇರುವ ಹುದ್ದೆಗಳಿಗೆ ಅರ್ಜಿ ಕರೆದಿದೆ. ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ. , ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ಸೋಪ್ಸ್ ಆಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜನವರಿ 10 2024ರಂದು ಪ್ರಕಟಣೆ ಹೊರಡಿಸಿದೆ. ಆದರೆ ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ, ವೃಂದವಾರು ವರ್ಗೀಕರಣ, ಅರ್ಜಿ ಸಲ್ಲಿಕೆಯ ಕೊನೇ ದಿನಾಂಕ ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಮಾಹಿತಿಯನ್ನು ಅಧಿಸೂಚನೆ ಪ್ರಕಟಿಸುವ ವೇಳೆ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉದ್ಯೋಗ ವಿವರ ಇಲ್ಲಿದೆ
ಶೈಕ್ಷಣಿಕ ಅರ್ಹತೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳ ಪ್ರಕಾರ ನಿಗದಿಯಾಗಲಿದೆ. ಮುಂದೆ ಪ್ರಕಟಗೊಳ್ಳಲಿದೆ.
ವಯೋಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿ ಮಾಡಲಿದೆ. ಶೀಘ್ರ ಪ್ರಕಟಗೊಳ್ಳಬಹುದು.
ವಯೋಮಿತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮದ ಪ್ರಕಾರ ವಯೋಮಿತಿ ನಿಗದಿಯಾಗಲಿದೆ.
ಅರ್ಜಿ ಶುಲ್ಕ: ಇನ್ನೂ ನಿಗದಿಯಾಗಿಲ್ಲ. ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ.
ಉದ್ಯೋಗ ಸ್ಥಳ: ಕರ್ನಾಟಕದ ನಾನಾ ಪ್ರದೇಶ
ಭರ್ತಿಯಾಗಲಿರುವ ಹುದ್ದೆಗಳ ವಿವರ ಇಲ್ಲಿದೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ 2503 ಹುದ್ದೆಗಳು
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KKRTC)ಯಲ್ಲಿ 1752 ಹುದ್ದೆಗಳು
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) 750 ಹುದ್ದೆಗಳು
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSB)ಯಲ್ಲಿ 64 ಹುದ್ದೆಗಳು
ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ (RGUHS) 44 ಹುದ್ದೆಗಳು
ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ನಲ್ಲಿ (KSDL) 38 ಹುದ್ದೆಗಳು
ಒಟ್ಟು ಹುದ್ದೆಗಳು 5151
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿರುವ ಹುದ್ದೆಗಳ ವಿವರ
ನಿರ್ವಾಹಕ – 2500
ಸಹಾಯಕ ಲೆಕ್ಕಿಗ – 01
ಸ್ಟಾಫ್ ನರ್ಸ್ – 01
ಫಾರ್ಮಸಿಸ್ಟ್ – 01