ಚಿಕ್ಕಮಗಳೂರು: ಕಳೆದ ಬಾರಿಯ ಲೋಕಸಭೆ ಚುನಾವಣೆ ಬೇರೆ. ಈ ಚುನಾವಣೆ ಬೇರೆ ಇರುತ್ತದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿಯ ಲೋಕಸಭೆ ಚುನಾವಣೆ ಬೇರೆ. ಈ ಚುನಾವಣೆ ಬೇರೆ ಇರುತ್ತದೆ. ಇವತ್ತು ಮಂಡ್ಯದಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಗೆಲ್ಲುವ ವಾತಾವರಣ ಇದೆ. ಕಳೆದ ಬಾರಿ ರೈತ ಸಂಘ, ಬಿಜೆಪಿ, ಕಾಂಗ್ರೆಸ್ ಎಲ್ಲರೂ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದರು. ಈಗ ಮಂಡ್ಯದಲ್ಲಿ ಆ ವಾತಾವರಣ ಇಲ್ಲಎಂದು ಹೇಳಿದರು.
Bigg News: ತಡರಾತ್ರಿ ಪಾರ್ಟಿ ಮಾಡಿದ ಆರೋಪ : ಪೊಲೀಸ್ ಠಾಣೆಗೆ ಹಾಜರಾದ ನಟರು: Video
ಇನ್ನೂ ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ ಎಂದರು. ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಹೋಗದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೆ ಸಂಬಂಧವಿಲ್ಲ. ರಾಮ ಮಂದಿರ ನಿಜವಾದ ರಾಮ ರಾಜ್ಯದ ಕನಸು ಎಂದು ಹೇಳಿದರು.