ಧಾರವಾಡ : ಯುವನಿಧಿ ಯೋಜನೆಗೆ ಧಾರವಾಡ ಜಿಲ್ಲೆಯಾದ್ಯಂತ ಇಲ್ಲಿಯವರೆಗೆ 2091 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಅರ್ಹ ಫಲಾನುಭವಿಗಳು ಯುವನಿಧಿ ಯೋಜನೆಯ ಸದ್ದುಪಯೋಗ ಪಡೆದುಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಧಾರವಾಡ ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
ಈಗಾಗಲೇ ಧಾರವಾಡ ಜಿಲ್ಲೆಯಾದ್ಯಂತ ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ 5ನೇ ಗ್ಯಾರಂಟಿ ಯೋಜನೆ ʼಯುವನಿಧಿʼ ಅಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮದ ನೊಂದಣಿ ಆರಂಭವಾಗಿದ್ದು, ಧಾರವಾಡ ಜಿಲ್ಲೆಯಲ್ಲಿ ಯುವನಿಧಿ ನೋಂದಣಿ ಮಾಡಿಸಿಕೊಳ್ಳಲು ಸಾಕಷ್ಟು ಪ್ರಚಾರ ಮಾಡಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸಲಿದೆ ಎಂದರು.
Bigg News: ತಡರಾತ್ರಿ ಪಾರ್ಟಿ ಮಾಡಿದ ಆರೋಪ : ಪೊಲೀಸ್ ಠಾಣೆಗೆ ಹಾಜರಾದ ನಟರು: Video
ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ₹ 3,000, ಡಿಪ್ಲೋಮಾ ಪದವೀಧರರಿಗೆ ₹ 1,500 ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. 2022- 2023ರಲ್ಲಿ ತೇರ್ಗಡೆಯಾಗಿರುವ ಪದವೀಧರರಿಗೆ ಉದ್ಯೋಗ ಸಿಗುವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡುತ್ತಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲ ಸಹಾಯವಾಣಿ ಸಂಖ್ಯೆ 18005999918 ನೀಡಲಾಗಿದ್ದು, ಉತ್ತಮ ರೀತಿಯಲ್ಲಿ ಸ್ಪಂದನೆ ವ್ಯಕ್ತವಾಗುವ ಭರವಸೆ ಇದೆ ಎಂದು ತಿಳಿಸಿದರು.