ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya Ram Mandir) ನಡೆಯುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಜನರು ಅವಕಾಶವಾದಿ ಹಿಂದೂಗಳಾಗಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಮತ ಪಡೆಯಲು ಮೃದು ಹಿಂದೂಗಳಾಗಲು ಪ್ರಯತ್ನಿಸುತ್ತಾರೆ. ಜವಾಹರಲಾಲ್ ನೆಹರೂ ನಂತರ ಕಾಂಗ್ರೆಸ್ಸಿನ ಯಾರೊಬ್ಬರೂ ಅಯೋಧ್ಯೆಗೆ ಹೋಗಿಲ್ಲ ಎಂದು ಕಿಡಿಕಾರಿದರು.
Gmail Accounts: ಜಿ-ಮೇಲ್ ಖಾತೆ ಹೊಂದಿದ್ದು ಬಳಸುತ್ತಿಲ್ಲವೆಂದರೆ ಈ ಸ್ಟೋರಿ ಓದಲೇಬೇಕು: ಶಾಕಿಂಗ್ ನ್ಯೂಸ್!
ನ್ಯಾಯಾಲಯದಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸುವ ಕೆಲಸವನ್ನು ಸ್ವತಃ ಕಾಂಗ್ರೆಸ್ (Congress) ಪಕ್ಷವೇ ಮಾಡಿದೆ. ಆದರೆ ಅವರಿಗೆ ಅಯೋಧ್ಯೆಗೆ ಹೋಗಲು ನೈತಿಕ ಶಕ್ತಿ ಇಲ್ಲ ಎಂದು ಸಚಿವರು ತಿಳಿಸಿದರು. ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi) ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಗೌರವ ಪೂರ್ವಕವಾಗಿ ಕಾಂಗ್ರೆಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ ಎಂದು ತಿಳಿಸಿದೆ.