ಬೆಂಗಳೂರು:- ಕರ್ನಾಟಕದಾದ್ಯಂತ ಚಳಿ ಚುರುಕು ಪಡೆದಿದೆ, ಹಲವೆಡೆ ಮಂಜು ಮುಸುಕಿದ ವಾತಾವರಣವಿದೆ.
ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಒಂದೆರಡು ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.