ನೆಲಮಂಗಲ:- ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲದ ಸುಭಾಷ್ ನಗರದಲ್ಲಿ ತಾನು ಪ್ರೀತಿಸಿದ ಹುಡುಗಿ ಬೇರೊಬ್ಬರ ಜೊತೆ ಮದುವೆಯಾದಳು ಎಂಬ ಕಾರಣಕ್ಕೆ ಮನನೊಂದ ಯುವಕ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಗನನ್ನು ಕಳೆದುಕೊಂಡ ಇಡೀ ಕುಟುಂಬ ಕಣ್ನೀರಲ್ಲಿ ಕೈತೊಳೆಯುತ್ತಿದೆ.
ಮೃತ ಪ್ರವೀಣ್ ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಯುವತಿ ಜೊತೆ ಲವ್ ಬ್ರೇಕಪ್ ಆಗಿತ್ತು. ಅಲ್ಲದೆ ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರ ಜೋತೆ ವಿವಾಹವಾದಳು. ಇದರಿಂದ ನೊಂದಿದ್ದ ಯುವಕ ಕಳೆದ 6 ತಿಂಗಳಿಂದ ಯುವತಿಯ ನೆನಪಲ್ಲೇ ಕಣ್ಣೀರು ಹಾಕಿದ್ದ. ಆದರೆ ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ರೂಂನ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.