ಹಠಾತ್ ಸಂಭವಿಸುವ ಹೃದಯಾಘಾತವನ್ನು ತಪ್ಪಿಸಲು ಮತ್ತು ತಡೆಯಲು ಸಹಾಯ ಮಾಡುವ ಕೆಲವು ಆಹಾರಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ. ಅವುಗಳೆಂದರೆ,
* ಮೀನು
ಆರೋಗ್ಯಕರ ಕೊಬ್ಬಿನಾಮ್ಲಗಳು ಹೃದಯದ ಆರೋಗ್ಯಕ್ಕೆ ಅತ್ಯಗತ್ಯ. ನಮ್ಮ ದೈನಂದಿನ ಆಹಾರದಲ್ಲಿ ಒಮೆಗಾ 3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಆಹಾರವನ್ನು ಸೇರಿಸುವುದು ಮುಖ್ಯವಾಗಿದೆ. ಈ ರೀತಿಯ ಆಹಾರಗಳಲ್ಲಿ ಮೀನುಗಳು ಕೂಡಾ ಒಂದಾಗಿವೆ. ಮೀನುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ನಿಮ್ಮ ಹೃದಯವನ್ನ ಕಾಪಾಡಿಕೊಳ್ಳಬಹುದು.
* ಸಿಟ್ರಸ್ ಹಣ್ಣುಗಳು
ಸಿಟ್ರಸ್ ಹಣ್ಣುಗಳಲ್ಲಿರುವ ವಿಟಮಿನ್ ಸಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಆಯಂಟಿಆಕ್ಸಿಡೆಂಟ್ಗಳು ಮತ್ತು ಫ್ಲೇವನಾಯ್ಡ್ಗಳು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಸಹಾಯ ಮಾಡುತ್ತದೆ.
* ಮಸಾಲೆಗಳು
ನಮ್ಮ ಅಡುಗೆಮನೆಯಲ್ಲಿನ ಮಸಾಲೆಗಳು ಅಡುಗೆ ರುಚಿಯನ್ನಷ್ಟೆ ಅಲ್ಲ ಹೃದಯದ ಆರೋಗ್ಯವನ್ನು ಕೂಡ ಹೆಚ್ಚಿಸುತ್ತದೆ. ಶುಂಠಿ, ಮೆಣಸು, ದಾಲ್ಚಿನ್ನಿ ಮತ್ತು ಲವಂಗದಂತಹ ಮಸಾಲೆಗಳಲ್ಲಿರುವ ಆಂಟಿಆಕ್ಸಿಡೆಂಟ್ಗಳು ಹೃದಯಾಘಾತವನ್ನು ತಡೆಯಲು ಸಹಾಯ ಮಾಡುವ ಮೂಲಕ ಹೃದಯದ ಆರೋಗ್ಯವನ್ನೂ ಸುಧಾರಿಸುತ್ತದೆ.
* ಈರುಳ್ಳಿ
ಈರುಳ್ಳಿಯನ್ನು ಭಾರತಿಯರು ಪ್ರತಿನಿತ್ಯದ ಅಡುಗೆಯಲ್ಲಿ ಬಳಸುತ್ತಾರೆ. ಈರುಳ್ಳಿಯಲ್ಲಿರುವ ಸಲ್ಫರ್ ಮತ್ತು ಇತರ ಪೋಷಕಾಂಶಗಳು ಹೃದಯದ ಅಪಧಮನಿಗಳ ಅಡಚಣೆಯನ್ನು ತಡೆಯಲು ಸಹಾಯ ಮಾಡುತ್ತದೆ.
* ಟೊಮೆಟೊ
ಟೊಮೆಟೊದಲ್ಲಿರುವ ಉರಿಯೂತ ನಿವಾರಕ ಗುಣಗಳು ಹೃದಯ ನಾಳಗಳಲ್ಲಿ ಅಡಚಣೆ ಮತ್ತು ಉರಿಯೂತವನ್ನು ತಡೆಯಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಟೊಮೆಟೊ ಬಹಳಷ್ಟು ಸಹಕಾರಿ.