ಹುಬ್ಬಳ್ಳಿ: ಶ್ರೀರಾಮನೊಬ್ಬನೇ ದೇವರು ಎಂದು ನಾವು ಎಲ್ಲಿಯೂ ಹೇಳಿಲ್ಲ. ರಾಮ ರಾಜ್ಯದ ಆಶಯದೊಂದಿಗೆ ಅಯೋಧ್ಯಯಲ್ಲಿ ಮಂದಿರ ನಿರ್ಮಾವಾಗುತ್ತಿದೆ. ಕಾಂಗ್ರೆಸ್ ನಾಯಕರಿಗೆ ಆ ಶ್ರೀರಾಮನೆ ಬುದ್ದಿ ಕರುಣಿಸಲಿ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.
ಶ್ರೀರಾಮನನ್ನು ತಾವೇ ಹುಟ್ಟಿಸಿದಂತೆ ಬಿಜೆಪಿಗರು ವರ್ತಿಸುತ್ತಿದ್ದಾರೆ ಎಂಬ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಹೇಳಿಕೆ ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ರೀತಿ ಪ್ರತಿಕ್ರಿಯಿಸಿದರು.
ಸತಾತನ ಧರ್ಮದ ಪುನರುತ್ಥಾನ, ದೇವನೊಬ್ಬ ನಾಮ ಹಲವು ಎನ್ನುವಂತೆ ನಮ್ಮಲ್ಲಿ ಮುಕ್ಕೋಟಿ ದೇವತೆಗಳಿದ್ದಾರೆ. ಆದರೆ, ಶ್ರೀರಾಮ ಹಿಂದುತ್ವದ ಪ್ರತೀಕ ಎಂದರು.
ಬಿಜೆಪಿ ಎಲ್.ಕೆ. ಅಡ್ವಾನಿ ಅವರು ಹೋರಾಟ ಆರಂಭಿಸುವ ಮುನ್ನ ಕಾಂಗ್ರೆಸ್ ನಾಯಕರು ಯಾರಾದರೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಬೇಕು ಎಂಬ ಹೇಳಿಕ್ಕೆ ನೀಡಿದ್ದರೆ ತೋರಿಸಲಿ. ಬಾಬರ್ ಬಿಡದ, ರಾಮನ ಹಿಡಿಯದ ಗೊಂದಲದಲ್ಲಿ ಕಾಂಗ್ರೆಸ್ ನಾಯಕರಿದ್ದರು ಎಂದು ತಿಳಿಸಿದರು.
ರಾಮ ಕಾಲ್ಪನಿಕ ವ್ಯಕ್ತಿ ಎಂದು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದು, ನಾಲ್ಕು ರಾಜ್ಯಗಳ ವಜಾ, ಕರಸೇವಕರ ಬಂಧನ, ದಾವಣಗೆರೆ, ಚನ್ನಪಟ್ಟಣದಲ್ಲಿ, ಬೆಂಗಳೂರಿನಲ್ಲಿ ಗೋಲಿಬಾರ್ ನಡೆಸಿದವರಿಂದ ಇಂತಹ ಹೇಳಿಕೆಗಳು ನಿರೀಕ್ಷಿತ. ಇಂಥವರಿಂದ ಬೇರೇನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಅನುದಾನ ಎಷ್ಟು ನೀಡಿದೆ?: ಕೇಂದ್ರದಲ್ಲಿ ಬಿಜೆಪಿ ಅಕಾರಕ್ಕೆ ಬರುವ ಪೂರ್ವದಲ್ಲಿ ೧೦ ವರ್ಷ ಕಾಂಗ್ರೆಸ್ ಮನಮೋಹನ ಸಿಂಗ್ ಅವರ ಸರ್ಕಾರ ಇತ್ತು. ಈ ಅವಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ. ಈಗ ಪ್ರಧಾನಿ ಮೋದಿ ಅವರು ಅಕಾರಕ್ಕೆ ಬಂದ ಬಳಿಕ ಎಷ್ಟು ಅನುದಾನ ನೀಡಿದ್ದಾರೆ ಎಂದು ತುಲನೆ ಮಾಡಲಿ ಎಂದರು.
ಬಿಜೆಪಿ ಅನುದಾನ ನೀಡಿದರ ಬಗ್ಗೆ ಎಂಬ ಮಾಹಿತಿಯನ್ನು ಶ್ವೇತ ಪತ್ರಹೊರಡಲಿಸಲಿ. ರಾಜ್ಯ ಕಾಂಗ್ರೆಸ್ ಸರ್ಕಾರ ಅಂಕಿ ಅಂಶಗಳನ್ನು ಮುಚ್ಚಿಟ್ಟು ಕೇಂದ್ರದ ವಿರುದ್ದ ಸುಳ್ಳು ಆರೋಪ ಮಾಡುತ್ತುದೆ. ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸಿಗರು ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.
ಯಪಿಎ ಅವಯ ೧೦ ವರ್ಷಗಳಲ್ಲಿ ೮೧,೭೯೫ ಕೋಟಿ ರೂ. ಅನುದಾನ ನೀಡಿದೆ. ೨೦೧೪ ರಿಂದ ಈ ವರೆಗೆ ಮೋದಿ ಬಿಡುಗಡೆ ಮಾಡಿದ್ದು ೨,೮೦,೧೩೦ ಕೋಟಿ ರೂಪಾಯಿ. ಯುಪಿಎ ಸರ್ಕಾರಕ್ಕಿಂತ ಶೇ. ೨೪೨ ರಷ್ಟು ಅನುದಾನವನ್ನು ಮೋದಿ ಸರ್ಕಾರ ಹೆಚ್ಚು ನೀಡಿದೆ. ಈ ಬಗ್ಗೆ ತಿಳಿದಿದ್ದರೂ ಆರ್ಥಿಕ ತಜ್ಞ ಸಿದ್ದರಾಮಯ್ಯ ಎಲ್ಲರ ದಾರಿ ತಪ್ಪಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಅನುದಾನದ ವಿಚಾರಣೆಯಲ್ಲಿ ಯಾವತ್ತೂ ರಾಜಕಾರಣ ಮಾಡಲ್ಲ. ಒಂದೇ ಸೀಟ್ ಇಲ್ಲದ ಕೇರಳಕ್ಕೂ ಸಾಕಷ್ಟು ಅನುದಾನ ಕೇಂದ್ರ ಸರ್ಕಾರ ನೀಡಿದೆ ಎಂದರು.
ಶಾಸಕ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯ ತಿಪ್ಪಣ್ಣ ಮಜ್ಜಗಿ, ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಮುಖಂಡ ದತ್ತಮೂರ್ತಿ ಕುಲಕರ್ಣಿ, ಬಿಜೆಪಿ ವಕ್ತಾರ ರವಿ ನಾಯಕ ಇದ್ದರು.