ಬೆಂಗಳೂರು:- ಹಿಂದೂ-ಮುಸ್ಲೀಂ ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹಿಂದುಗಳಾಗಲಿ, ಮುಸ್ಲಿಮರಾಗಲಿ ಯಾರಿಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದರು.
ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ನಾವು ತುಂಬ ಕಟ್ಟು ನಿಟ್ಟಾಗಿದ್ದೇವೆ. ಹಿಂದುಗಳಾಗಲೀ ಮುಸ್ಲಿಮರಾಗಲೀ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ನಾವು ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ ಅವರಿಬ್ಬರು, ಯಾ ಕಾರಣಕ್ಕೂ ಇಂಥ ಘಟನೆಗಳನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.