ಬೆಂಗಳೂರು:- ರಾಜ್ಯದಲ್ಲಿ ಇಂದು 119 ಮಂದಿಗೆ ಕೊರೊನಾ ದೃಢವಾಗಿದ್ದು, ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕಡಿಮೆಯಾಗಿದ್ದು 119 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 959ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 33 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 119 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ 152 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 4,942 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.54 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.