ಬೆಂಗಳೂರು:-ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ.
ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ. ನಕಲಿ ಉತ್ಪನ್ನ, ಪ್ಯಾಕಿಂಗ್ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ. ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂಬಿ. ಪಾಟೀಲ್ಗೆ ಅನಾಮಧೇಯ ಕರೆ ಬಂದಿದೆ. ಆ ಮೂಲಕ ಕಾರ್ಖಾನೆ ಎಂಡಿ ಡಾ. ಪ್ರಶಾಂತ್ಗೆ ನಿಗಾ ವಹಿಸಲು ಸೂಚಿಸಿದ್ದಾರೆ.