ಬೆಂಗಳೂರು:– ನಗರೂರಿನಿಂದ ಮೆಜಸ್ಟಿಕ್ ಬರುವ ಮಾರ್ಗದಲ್ಲಿ ಡಿಪೋ- 40 ಕ್ಕೆ ಸೇರಿದ ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ವಿಚಾರಕ್ಕೆ ಓರ್ವ ಮಹಿಳೆಯಿಂದ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ಆರೋಪ ಕೇಳಿಬಂದಿದೆ.
ಬಸ್ ಕಂಡಕ್ಟರ್ ಸುಕನ್ಯಾ ಮೇಲೆ ಹಲ್ಲೆ ಮಾಡಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಟಿಕೆಟ್ ಪಡೆಯದೇ ಓರ್ವ ಮಹಿಳೆ ಹಾಗೆಯೇ ಕುಳಿತಿದ್ದಾರೆ. ಟಿಕೆಟ್ ಪಡೆಯುವ ವಿಚಾರಕ್ಕೆ ಸುಕನ್ಯಾ ಜೊತೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಮಹಿಳೆ ಹಲ್ಲೆ ಮಾಡಿದ್ದಾರೆ. ಪೀಣ್ಯ ಪೊಲೀಸ್ ಠಾಣೆಗೆ ಕಂಡಕ್ಟರ್ ದೂರು ನೀಡಿದ್ದಾರೆ.