ಬೆಂಗಳೂರು:– ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ, ಅನಂತಕುಮಾರ ಹೆಗಡೆ ವಿರುದ್ಧ ಪೊಲೀಸ್ ಕಮಿಷನರ್ಗೆ ಲಿಖಿತ ದೂರು ನೀಡಲಾಗಿದೆ.
ಪೊಲೀಸ್ ಕಮಿಷನರ್ಗೆ ಡಿಸಿಪಿ ಮುತ್ತುರಾಜ್ ಮೂಲಕ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಲಿಖಿತ ದೂರು ನೀಡಿದ್ದಾರೆ. ಅನಂತ ಕುಮಾರ್ ಹೆಗಡೆ ಕೋಮು ಸಂಘರ್ಷಕ್ಕೆ ಪ್ರಚೋದಿಸುತ್ತಿದ್ದಾರೆ. ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇನ್ನೂ ಜನವರಿ 13ರಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕುಮಟಾದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರನ್ನು ಏಕವಚನದಲ್ಲಿ ನಿಂದಿಸುವುದಲ್ಲದೆ ಪ್ರಚೋದಿಸುವ ಮಾಡಿದ್ದಾರೆ. ಹಿಂದೂ ಸಮಾಜವನ್ನು ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಮುರುಕುರಾಮಯ್ಯ ಅಂಥವರು ಒಡೆಯುತ್ತಿದ್ದಾರೆ ಎಂದು ಆಧಾರರಹಿತ ಆರೋಪ ಮಾಡಿದ್ದಾರೆ.
ನಮ್ಮ ವಿರೋಧಿ ಸಿದ್ದರಾಮಯ್ಯ ಹೊರತು ಕಾಂಗ್ರೆಸ್ ಅಲ್ಲ. ಅಲ್ಪಸಂಖ್ಯಾತರ ಮತಗಳಿಗಾಗಿ ಗತಿಗೆಟ್ಟ ಮಾನಸಿಕತೆಗೆ ನಮ್ಮ ವಿರೋಧವಿದೆ. ಇದಲ್ಲದೇ ಭಟ್ಕಳದ ಚಿನ್ನದಪಳ್ಳಿ ಮಸೀದಿ ಧ್ವಂಸ ಮಾಡುವುದಾಗಿ ಹೇಳಿದ್ದಾರೆ. ಅನಂತಕುಮಾರ್ ಹೆಗಡೆಯವರು “ಸಿದ್ದರಾಮಯ್ಯ ನೀ ಬರ್ಲಿ ಬಿಡ್ಲಿ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ” ಎಂದು ನಿಂದಿಸಿದ್ದಾರೆ. ಇವರು ನಿರಂತರವಾಗಿ ಸಿದ್ದರಾಮಯ್ಯನವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುತ್ತಾರೆ.