ಹುಬ್ಬಳ್ಳಿ: ನನ್ನನ್ನು ಮತ್ತೆ ಬಿಜೆಪಿಗೆ (BJP) ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆ ನೀಡಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ತೊರೆದ ನಂತರ ಆಗಿರೋ ಹಾನಿ ಬಗ್ಗೆ ಅವರಿಗೆ ಮನವರಿಕೆ ಆಗಿದೆ.
H Anjaneya: ಬಿಜೆಪಿ ರಾಮನ ಹೆಸರಲಿ ರಾಜಕೀಯ ಮಾಡ್ತಿರೋದ್ರಿಂದ ನಾವು ಹೋಗಲ್ಲ: ಎಚ್ ಆಂಜನೇಯ
ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿ ಇದ್ದಾರೆ. ದೊಡ್ಡ ಮಟ್ಟದ ಯಾವುದೇ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಆದರೆ ಹಲವಾರು ನಾಯಕರು ವಾಪಸ್ ತರುವಂತೆ ಒತ್ತಡ ಹಾಕಿರೋ ಮಾಹಿತಿ ಇದೆ. ಯಾರು ಏನೇ ಪ್ರಯತ್ನ ಮಾಡಿದ್ರೂ ನಾನು ಬಿಜೆಪಿಗೆ ವಾಪಸ್ಸಾಗಲ್ಲ ಎಂದು ಸ್ಪಷ್ಟನೆ ನೀಡಿದರು.