ಚಾಮರಾಜನಗರ: ಮಕರ ಸಂಕ್ರಾಂತಿ ಹಬ್ಬದಂದು ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಸಂತೋಷ್(32), ಸೌಮ್ಯ(27) ನಿತ್ಯಸಾಕ್ಷಿ (4) ಅಭಿ(9) ಮೃತ ದುರ್ದೈವಿಗಳು.
ಪಾಳ್ಯದ ಗ್ರಾಮದ ಮೃತ ಕುಟುಂಬದವರು ಹೊಸ ಬಟ್ಟೆ ಖರೀದಿಸಲು ಕೊಳ್ಳೇಗಾಲಕ್ಕೆ ತೆರಳುತ್ತಿದ್ದವರು ಈ ವೇಳೆ ಭತ್ತ ಕಟಾವು ಮಾಡುವ ಲಾರಿಯು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.