ದಾವಣಗೆರೆ: ದೇವಾಲಯಗಳ ಸ್ವಚ್ಛತಾ ಕಾರ್ಯ ನಡೆಸುವಂತೆ ಪ್ರಧಾನಿ ಮೋದಿ ಕರೆ ಹಿನ್ನಲೆಯಲ್ಲಿ ಇಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ದೇಗುಲಗಳ ಸ್ವಚ್ಛತೆಗಿಳಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪಾಂಡುರಂಗ ವಿಠ್ಠಲ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದು ನೀರು ಹಾಕಿ ಸ್ವಚ್ಛಗೊಳಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು.
ರೇಣುಕಾಚಾರ್ಯ ಸ್ವಚ್ಛತಾ ಕಾರ್ಯಕ್ಕೆ ಹೊನ್ನಾಳಿ ತಾಲೂಕು ಬಿಜೆಪಿ ಅಧ್ಯಕ್ಷ ಸೇರಿದಂತೆ ಕಾರ್ಯಕರ್ತರ ಸಾಥ್.
ಅಯೋಧ್ಯೆಯಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆ ಮನೆಮನೆಗೆ ಮಂತ್ರಾಕ್ಷತೆ ಹಾಗೂ ಶ್ರೀರಾಮನ ಭಾವಚಿತ್ರ ಮತ್ತು ಕರ ಪತ್ರ ವಿತರಣೆ.ಮಂತ್ರಾಕ್ಷತೆ ನೀಡಿ ಪೂಜೆ ಸಲ್ಲಿಸುವಂತೆ ಜನರಲ್ಲಿ ಬಿಜೆಪಿ ಕಾರ್ಯಕರ್ತರ ಮನವಿ.
ಹೊನ್ನಾಳಿ ತಾಲೂಕಿನ ಕೊಡತಾಳ್ ತಾಂಡ, ಮಾಚಗೊಂಡನಹಳ್ಳಿ ಹಾಗೂ ಮಾಚಗೊಂಡನಹಳ್ಳಿ ತಾಂಡದಲ್ಲಿ ಮಂತ್ರಾಕ್ಷತೆ ವಿತರಣೆ.