ಚಾಮರಾಜನಗರ:- ಮಕರ ಸಂಕ್ರಾಂತಿ ಹಬ್ಬದಂದು ಗಡಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಬೈಕ್ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ದುರ್ಮರಣ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆ ಸರಹದ್ದಿನ ದೊಡ್ಡಲತ್ತೂರು ಬಳಿ ದುರ್ಘಟನೆ ಸಂಭವಿಸಿದೆ.
ಹನೂರು ತಾಲೂಕಿನ ದೊಡ್ಡಾಲತ್ತೂರು ಗ್ರಾಮದ ಶರತ್ ,ಕೆಂಪನಟ್ಟಿ ಗ್ರಾಮದ ಮದನ್ ಕುಮಾರ್ ಸಾವನ್ಬಪ್ಪಿದ ದುರ್ದೈವಿಗಳು. ದ್ವಿಚಕ್ರ ವಾಹನಗಳ ಮುಖಾ ಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಇಬ್ಬರೂ ಸಾವನ್ನಪ್ಪಿದ್ದಾರೆ.
ಮತ್ತೋರ್ವ ಬೈಕ್ ಸವಾರಮ ಪುದುರಾಮಪುರ ನಿವಾಸಿ ಕುಮಾರ್ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇಂದು ಸಂಜೆ ಘಟನೆ ಜರುಗಿದೆ. ಘಟನಾ ಸ್ಥಳಕ್ಕೆ ರಾಮಾಪುರ ಪೊಲೀಸ್ ಠಾಣಾ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.