ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರ ಹಿರಿಯ ಸಹೋದರಿ ರಾಜೇಶ್ವರಿಬೆನ್ ಶಾ (Rajeshwariben Shah) ನಿಧನರಾಗಿದ್ದಾರೆ. ರಾಜೇಶ್ವರಿಬೆನ್ ಅವರಿಗೆ ಸುಮಾರು 60 ವರ್ಷ ವಯಸ್ಸಾಗಿತ್ತು. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಸಹೋದರಿಯ ನಿಧನದ ಹಿನ್ನೆಲೆಯಲ್ಲಿ ಹೇಗ ಸಚಿವರು ಇಂದು ಗುಜರಾತ್ನಲ್ಲಿ (Gujrat) ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೆಲ ದಿನಗಳಿಂದ ರಾಜೇಶ್ವರಿಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರು ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
Killing a child: ನೇಲ್ ಪಾಲಿಶ್ ರಿಮೂವರ್ ಕುಡಿಸಿ ಮಗುವಿನ ಹತ್ಯೆ: ಮಹಿಳೆ ಅರೆಸ್ಟ್!
ಆದರೆ ಅವರು ಕೊನೆಯುಸಿರೆಳೆದರು ಎಂದು ಬಿಜೆಪಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸಹೋದರಿಯ ರಾಜೇಶ್ವರಿಬೆನ್ ಪಾರ್ಥಿವ ಶರೀರವನ್ನು ಅಹಮದಾಬಾದ್ನಲ್ಲಿರುವ ಅವರ ನಿವಾಸಕ್ಕೆ ತರಲಾಗಿತ್ತು. ನಂತರ ಥಾಲ್ತೇಜ್ ಚಿತಾಗಾರದಲ್ಲಿ ಅವರ ಅಂತಿಮ ಸಂಸ್ಕಾರ ನಡೆದಿದೆ.