ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಿಂತಿದ್ದ 4 ಬೈಕ್ಗಳಿಗೆ ಬೆಂಕಿ ತಗುಲಿದ್ದು ಬೈಕ್ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Cumin Seeds Benefits: ಅಬ್ಬಾಬ್ಬ ಜೀರಿಗೆ ಸೇವಿಸುವುದರಿಂದ ಆಗುವ ಪ್ರಯೋಜನಗಳು ಒಂದೆರಡಲ್ಲ..!
ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದ್ವಿಚಕ್ರ ವಾಹನಗಳು ಸುಟ್ಟು ಹೋದ ಕಾರಣ ಸವಾರರು ಕಂಗಾಲಾಗಿದ್ದಾರೆ.