ಮಂಡ್ಯ:- ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ಸಂಜೆ 4 ಗಂಟೆ ಸಮಯಕ್ಕೆ ಜಮೀನೊಂದರಲ್ಲಿ ಹುಲಿ ಓಡಾಡುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.
ಇನ್ನು ಹುಲಿ ರಸ್ತೆ ದಾಟುತ್ತಿರುವ ವಿಡಿಯೊವನ್ನು ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೊಗಳನ್ನು ಕಂಡ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಹುಲಿ ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.