ನವದೆಹಲಿ: ಭಾರತ (India) ಮತ್ತು ಅರ್ಜೆಂಟೀನಾ (Argentina) ನಡುವೆ 5 ಲಿಥಿಯಂ ಬ್ಲಾಕ್ಗಳ ಪರಿಶೋಧನೆ ಹಾಗೂ ಗಣಿಗಾರಿಕೆಗೆ ಒಪ್ಪಂದ ಏರ್ಪಟ್ಟಿದೆ. ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್ಗಳ ಪರಿಶೋಧನೆ ಮತ್ತು ಗಣಿಗಾರಿಕೆ ಒಪ್ಪಂದಕ್ಕೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಟ್ವಿಟ್ಟರ್ ಮೂಲಕ ಮಾಹಿತಿ ರವಾನಿಸಿದ್ದಾರೆ.
Recruitment: ನಿಮ್ಹಾನ್ಸ್’ನಲ್ಲಿ ಕೆಲಸ ಖಾಲಿ ಇದೆ..! ತಿಂಗಳಿಗೆ ₹ 90,000 ಸಂಬಳ – ಇಂದೇ ಕೊನೆ ದಿನಾಂಕ
ಅರ್ಜೆಂಟೀನಾದಲ್ಲಿ 5 ಲಿಥಿಯಂ ಬ್ಲಾಕ್ಗಳಲ್ಲಿ ಗಣಿಗಾರಿಕೆ (Lithium Mining) ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಹಿ ಹಾಕುವ ಮೂಲಕ ಭಾರತ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಖನೀಜ್ ಬಿಡೇಶ್ ಇಂಡಿಯಾ ಲಿಮಿಟೆಡ್ ಮತ್ತು CAMYEN, ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದ ಸರ್ಕಾರಿ ಸ್ವಾಮ್ಯದ ಕಂಪನಿ ನಡುವೆ ಒಪ್ಪಂದ ಏರ್ಪಟ್ಟಿದೆ. ಈ ಯೋಜನೆ ಭಾರತಕ್ಕೆ ಲಿಥಿಯಂ ಪೂರೈಕೆಯನ್ನು ಬಲಪಡಿಸುತ್ತದೆ ಎಂದು ಜೋಶಿ ಹೇಳಿದ್ದಾರೆ.