ಲೋಹಿತ್.ಹೆಚ್ (Lohit) ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ (Prajwal Devaraj) & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ ‘ಮಾಫಿಯಾ’ (Mafia) ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಮಾಫಿಯಾ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.
ಇದೊಂದು ವಿಭಿನ್ನ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಮೂಡಿಸಿದೆ. ಅದರ ಭಾಗವಾಗಿ ಟೀಸರ್ ರಿಲೀಸ್ ಕೂಡ ಆಗಿದ್ದು, ಅದಕ್ಕೆ ಅದ್ಭುತ ರೆಸ್ಪಾನ್ಸ್ ಕೂಡ ಸಿಕ್ಕಿತ್ತು.
ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿವೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.
ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.