ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.
169 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 15, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 15, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ (NCL) ಅಭ್ಯರ್ಥಿಗಳು- 8 ವರ್ಷ
SC/ST ಅಭ್ಯರ್ಥಿಗಳು- 10 ವರ್ಷ
ವೇತನ:
ಮಾಸಿಕ ₹ 21,700-69,100
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳು: Nil
UR/OBC/EWS ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ದೈಹಿಕ ಪ್ರಮಾಣಿತ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವಿವರವಾದ ವೈದ್ಯಕೀಯ ಪರೀಕ್ಷೆ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಹಾಕಲು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/01/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 15, 2024