ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ರೋಹಿತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
2019ರಿಂದ ಭಾರತದಲ್ಲಿ ಆಡಿದ ಟಿ20 ಸರಣಿಯಲ್ಲಿ ಒಂದರಲ್ಲೂ ಭಾರತ ಸರಣಿಯನ್ನು ಸೋತಿಲ್ಲ. ಆಡಿದ 15 ಸರಣಿಗಳಲ್ಲಿ 13 ಸರಣಿ ವಶಪಡಿಸಿಕೊಂಡಿದೆ. ಉಳಿದ ಎರಡು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇನ್ನೂ ಮೂರನೇ ಟಿ20ಯಲ್ಲಿ ಭಾರತ ಗೆದ್ದರೆ, ಟೀಮ್ ಇಂಡಿಯಾ ಪರ ನಾಯಕನಾಗಿ 41 ಟಿ20 ಪಂದ್ಯಗಳನ್ನು ಗೆದ್ದ ಧೋನಿಯವರ ದಾಖಲೆಯನ್ನು ರೋಹಿತ್ ಮುರಿಯಲಿದ್ದಾರೆ