ಬಿಗ್ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ಗೆ ಈಗ ಸಂಕಷ್ಟ ಎದುರಾಗಿದ್ದು, ಬಿಬಿಎಂಪಿ ಅಧಿಕಾರಿ ಪ್ರಯಾಗ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಪ್ರಯಾಗ್ ರಾಜ್ 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರಕ್ಕೆ ವಾದ – ಪ್ರತಿವಾದ ನಡೆದಿದ್ದು, ಇಂದು ಕೋರ್ಟ್ನಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ವಕೀಲರು ತಿಳಿಸಿದ್ದಾರೆ.
ಬಿಗ್ಬಾಸ್ ಮನೆಯಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್ (Qurantine) ಕಹಾನಿ ಬಗ್ಗೆ ಹೇಳಿಕೊಂಡಿದ್ದರು. ಈ ವೇಳೆ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ಮೆಂಟಲಿ ಅನ್ಸ್ಟೇಬಲ್ ಅಂತಾ ಸಹಿ ಮಾಡುವಂತೆ ತಲೆತಲೆಗೆ ಹೊಡೆದು ಕಿರುಕುಳ ಕೊಟ್ಟಿದ್ದರು. ಹೋಟೆಲ್ನಿಂದ ಕೆಳಗೆ ಬಂದ್ಮೇಲೆ ನನಗೆ ಏನೇನು ಮಾಡಿದ್ರೋ, ಅದನ್ನ ಸ್ವಲ್ಪ ಹೇಳಿದೆ. ಇವ್ನು ಹೇಗಿದ್ರೂ ಸುಳ್ಳು ಹೇಳ್ತಾನೆ. ಇವ್ನು ಹೇಳೋದೇ ಸುಳ್ಳು.. ನಂಬಬೇಡಿ ಎಂದು ಮಾಧ್ಯಮಗಳಿಗೆ ಹೇಳಿ ಕಳುಹಿಸಿದರು. ಕ್ವಾರಂಟೈನ್ನಲ್ಲಿ ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದು ಡ್ರೋನ್ ಪ್ರತಾಪ್ ಆರೋಪ ಮಾಡಿದ್ದರು