ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಇಂದು 38 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೈಸೂರು ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.14ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7,579 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 672 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 165 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಇನ್ನೂ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಗಳು ಇಳಿಮುಖಗೊಂಡಿದೆ. ಕೊವಿಡ್ ಕೇಸ್ ಇಳಿಕೆ ಬೆನ್ನಲ್ಲೇ ಪ್ರಸ್ತುತ ಮಾರ್ಗಸೂಚಿ ಪಾಲಿಸಲು ಆರೋಗ್ಯ ಇಲಾಖೆ ಸಲಹೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರಲ್ಲಿ ILI ಲಕ್ಷಣ ಇರುವವರಿಗೆ ಟೆಸ್ಟ್ ಕಡ್ಡಾಯ. ಹೋಮ್ ಐಸೋಲೇಷನ್ನಲ್ಲಿರುವ ಸೋಂಕಿತರ ಬಗ್ಗೆ ಪಿಹೆಚ್ಸಿ, ಯುಪಿಹೆಚ್ಸಿ, ನಮ್ಮ ಕ್ಲಿನಿಕ್ ಸಿಬ್ಬಂದಿ ಗಮನ ಹರಿಸಬೇಕು.
ಆರೋಗ್ಯ ಸಮಸ್ಯೆ ಇರುವ ಸೋಂಕಿತರ ಉಸಿರಾಟದ ಬಗ್ಗೆ ಗಮನಹರಿಸುವುದು, ಅಗತ್ಯವಿದ್ದಲ್ಲಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು. ICUನಲ್ಲಿ ಚಿಕಿತ್ಸೆ ಪಡೆಯುವ ಮಾರ್ಗಸೂಚಿ ಕಡ್ಡಾಯ ಪಾಲಿಸಬೇಕು ಎಂದು ಹೇಳಿದೆ.