ಚಾಮರಾಜನಗರ: ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಚ ಮಾಜಿ ಶಾಸಕ ಸಿ.ಎಸ.ನಿರಂಜನಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ನಾರಾಯಣ್ ಪ್ರಸಾದ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕರಾದ ಪ್ರೊ: ಕೆ.ಆರ್. ಮಲ್ಲಿಕಾರ್ಜುನಪ್ಪ, ಬಾಲರಾಜ್, ಬರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ನೂರೊಂದುಶೆಟ್ಟಿ, ಮಾಜಿ ಕಾಡಾ ಅಧ್ಯಕ್ಷ ನಿಜಗುಣರಾಜು,ಬಿಜೆಪಿ ಮಾಜಿ ಅಧ್ಯಕ್ಷ ಆರ್.ಸುಂದರ್,
ಜಿ.ಪಂ.ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ, ನಾಗಶ್ರೀ ಪ್ರತಾಪ್, ಕೊಡಸೋಗೆ ಶಿವಬಸಪ್ಪ, ಮಂಗಲ ಶಿವಕುಮಾರ್ ಅರಕಲವಾಡಿ ನಾಗೇಂದ್ರ, ನಗರಸಭಾ ಮಾಜಿ ಅಧ್ಯಕ್ಷೆ ಆಶಾ ನಟರಾಜ್ ನಗರಸಭಾ ಸದಸ್ಯ ಮಮತ ಕುಮುದಾ ಸೇರಿದಂತೆ ಭಾರತೀಯ ಜನತಾ ಪಾರ್ಟಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.