ಬೆಂಗಳೂರು:- ಅಂಬೇಡ್ಕರ್ ಹೆಸರಲ್ಲೂ ರಾಮನಿದ್ದಾನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಅಂಬೇಡ್ಕರ್ ಅವರು, ಹಿಂದೂ ಧರ್ಮದಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ಬೌದ್ಧ ಧರ್ಮಕ್ಕೆ ಹೋಗಿದ್ದರು. ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮಕ್ಕೆ ಅವರು ಹೋಗಿಲ್ಲ. ರಾಮಮಂದಿರದ ಅರ್ಚಕರಲ್ಲಿ 24 ಜನರ ಪೈಕಿ ಇಬ್ಬರು ದಲಿತರಿದ್ದಾರೆ. ಹಿಂದೂ ಧರ್ಮ ಬದಲಾಗುತ್ತಿದೆ ಎಂದಿದ್ದಾರೆ.
ಕಾಂಗ್ರೆಸ್ (Congress) ಪಕ್ಷದ ಭವಿಷ್ಯ ಅಲ್ಪಸಂಖ್ಯಾತರ ಕೈಯಲ್ಲಿದೆ ಎಂದುಕೊಂಡು ಹಿಂದೂಗಳನ್ನ ನಿಂದಿಸುತ್ತಿದ್ದಾರೆ. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯನ್ನು ಕಾಂಗ್ರೆಸ್ ಮನಬಂದಂತೆ ಟೀಕಿಸುತ್ತಿದೆ. ಕಾಂಗ್ರೆಸ್ನ ಈ ನಿಲುವನ್ನು ನಾನು ಖಂಡಿಸುತ್ತೇನೆ. ಸಿಎಂ ಸಿದ್ದರಾಮಯ್ಯ ಅವರು ಮೊದಲು ವಿರೋಧಿಸಿದ್ದರು. ಜನ ಉತ್ತರ ಕೊಡಲು ಆರಂಭಿಸಿದ ಮೇಲೆ ಬದಲಾದರು ಇದನ್ನು ನಾನು ಮೆಚ್ಚುತ್ತೇನೆ.
ಸಚಿವರಾದ ಕೆ.ಎನ್ ರಾಜಣ್ಣ ಹಾಗೂ ಪ್ರಿಯಾಂಕ್ ಖರ್ಗೆ ಮನಬಂದಂತೆ ಮಾತಾಡಿದ್ದಾರೆ. ಜನರೇ ಇದಕ್ಕೆ ಉತ್ತರ ಕೊಡುತ್ತಾರೆ. ಅವರೆಲ್ಲ ಶ್ರೀರಾಮನನ್ನು ಅವಹೇಳನ ಮಾಡಿದಾಕ್ಷಣ ದೊಡ್ಡ ನಾಯಕರಾಗ್ತಾರೆ ಎಂಬ ತಪ್ಪು ಭಾವನೆಯಲ್ಲಿದ್ದಾರೆ. ಪೊಸ್ಟರ್ ಹಾಕಿದರೆ ಅದನ್ನ ಕತ್ತರಿಸ್ತಾರೆ. ಮಂತ್ರಾಕ್ಷತೆಯನ್ನು ಎಲ್ಲಾ ಕಡೆ ಹಂಚಿಕೆ ಮಾಡಲಾಗ್ತಿದೆ. ಕಾಂಗ್ರೆಸ್ನವರು ಅದನ್ನು ಬಿಸಾಡುವ ಕೆಲಸ ಮಾಡ್ತಿದ್ದಾರೆ. ಜನರಿಗೆ ಕೊಡುತ್ತಿರುವುದು ರಾಜ್ಯದ ಅಕ್ಕಿಯಲ್ಲ. ಮೋದಿ ಕೊಡುತ್ತಿರುವ ಅಕ್ಕಿ, ಜನರ ಕಿವಿ ಮೇಲೆ ಹೂವು ಇಡಬೇಡಿ ಡಿಕೆಶಿಯವರೇ ಎಂದಿದ್ದಾರೆ.