ಅಯೋಧ್ಯೆ:– ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಭಯೋತ್ಪಾದನ ನಿಗ್ರಹ ದಳ ಅರೆಸ್ಟ್ ಮಾಡಿದ್ದಾರೆ.
ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿಯೊಂದು ಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಗುರುವಾರ ಭಯೋತ್ಪಾದನಾ ನಿಗ್ರಹ ದಳ ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಈ ಸಂಬಂಧ ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಮಾತನಾಡಿ, ಗುರುವಾರ ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಶಂಕಿತ ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಜಿಪಿ ಕುಮಾರ್ ಹೇಳಿದ್ದಾರೆ.