ಕಲಬುರ್ಗಿ:- ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸ್ಟಾಪ್ಓವರ್ ನಂತರ ಸೇನೆಯ ಚಾಪರೊಂದರಲ್ಲಿ ಸೋಲಾಪುರಗೆ ಪ್ರಧಾನಿ ನರೇಂದ್ರ ಮೋದಿ ಅವರು ತೆರಳಿದ್ದಾರೆ
ಭಾರತೀಯ ವಾಯು ಸೇನೆಯ ವಿಮಾನದಲ್ಲಿ ಬೆಳಗ್ಗೆ 9.35 ಕ್ಕೆ ನಗರದಲ್ಲಿ ಲ್ಯಾಂಡ್ ಆದ ಪ್ರಧಾನಿ ಮೋದಿ ಕೂಡಲೇ ಅಂದರೆ 9.40ಕ್ಕೆ ಸೇನೆಯ ಹೆಲಿಕ್ಪಾಪ್ಟರ್ ವೊಂದರ ಮೂಲಕ ಸೋಲಾಪುರಗೆ ತೆರಳಿದರು.
ಅವರ ಆಗಮನದ ಹಿನ್ನೆಲೆ ಭದ್ರತೆ ದೃಷ್ಟಿಯಿಂದ ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯ ತರನ್ನುಮ್ ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆ ಪ್ರತಿಬಂಧಕಾಜ್ಞೆ ವಿಧಿಸಿದ್ದಾರೆ. ಸೋಲಾಪುರದಿಂದ ಮಧ್ಯಾಹ್ನ 1 ಗಂಟೆಗೆ ಕಲಬುರಗಿಗೆ ವಾಪಸ್ಸಾಗಲಿರುವ ಪ್ರಧಾನಿ ಮೋದಿ 1.05 ಕ್ಕೆ ವಾಯುಪಡೆಯ ಅದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.