ಚುಮುಚುಮು ಚಳಿಗೆ ಚಹಾದೊಂದಿಗೆ ಬಿಸಿಬಿಸಿಯಾಗಿ ತಿನ್ನಲು ಏನಾದರೂ ಸಿಕ್ಕರೆ ಅದರಲ್ಲಿ ಸಿಗುವ ಆನಂದವೇ ಬೇರೆ.ಕೇವಲ 10 ನಿಮಿಷದಲ್ಲಿ ತಯಾರಿಸಬಹುದಾದ ಪನೀರ್ ಪಕೋಡ ರೆಸಿಪಿ ಹೇಗೆ ಮಾಡುವುದು ಎಂಬುದನ್ನು ತಿಳಿಸುತ್ತಿದ್ದೇವೆ. ಹಾಗಿದ್ರೆ ಇದನ್ನು ಯಾವರೀತಿ ಮಾಡುವುದು ಎಂಬುದನ್ನು ತಿಳಿದುಕೊಳ್ಳಿ
ಬೇಕಾಗುವ ಸಾಮಗ್ರಿಗಳು:
ಪನೀರ್ ಕ್ಯೂಬ್ಸ್ – 500 ಗ್ರಾಂ
ಕಡ್ಲೆ ಹಿಟ್ಟು – 1 ಕಪ್
ಅಚ್ಚಖಾರದ ಪುಡಿ – 1 ಚಮಚ
ಅರಶಿಣ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಜೀರಿಗೆ ಪುಡಿ – ಅರ್ಧ ಚಮಚ
ಅಡುಗೆ ಸೋಡಾ – 1 ಚಮಚ
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಚಾಟ್ ಮಸಾಲ – ಸ್ವಲ್ಪ
ಪನೀರ್ ಕ್ಯೂಬ್ಸ್ – 500 ಗ್ರಾಂ
ಕಡ್ಲೆ ಹಿಟ್ಟು – 1 ಕಪ್
ಅಚ್ಚಖಾರದ ಪುಡಿ – 1 ಚಮಚ
ಅರಶಿಣ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಜೀರಿಗೆ ಪುಡಿ – ಅರ್ಧ ಚಮಚ
ಅಡುಗೆ ಸೋಡಾ – 1 ಚಮಚ
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಚಾಟ್ ಮಸಾಲ – ಸ್ವಲ್ಪ
ಮಾಡುವ ವಿಧಾನ:
* ಮೊದಲಿಗೆ ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟನ್ನು ಹಾಕಿಕೊಂಡು ಅದಕ್ಕೆ ನೀರು, ಅಚ್ಚಖಾರದ ಪುಡಿ, ಜೀರಿಗೆ ಪುಡಿ, ಉಪ್ಪು, ಅರಶಿಣ ಮತ್ತು ಸೋಡಾ ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಂಡು ದಪ್ಪ ಮಿಶ್ರಣವನ್ನು ಮಾಡಿಕೊಳ್ಳಿ.
* ಈಗ ಪನೀರ್ ಕ್ಯೂಬ್ಸ್ ಅನ್ನು ಈ ಮಿಶ್ರಣದಲ್ಲಿ ಚನ್ನಾಗಿ ಅದ್ದಿ ಮಿಶ್ರಣದೊಂದಿಗೆ ಪನೀರ್ ಚನ್ನಾಗಿ ಹೊಂದಿಕೊಳ್ಳುವಂತೆ ಕೋಟಿಂಗ್ ಮಾಡಿ.
* ಬಳಿಕ ಒಂದು ಬಾಣಾಲೆಯಲ್ಲಿ ಸ್ವಲ್ಪ ಎಣ್ಣೆ ಬಿಸಿಗಿಟ್ಟು, ಕಾದ ಬಳಿಕ ಅದಕ್ಕೆ ಕಡ್ಲೆಹಿಟ್ಟಿನ ಮಿಶ್ರಣದಲ್ಲಿ ಅದ್ದಿದ ಪನೀರ್ ಕ್ಯೂಬ್ಸ್ ಅನ್ನು ಹಾಕಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಿ. ಅದೇ ರೀತಿ ಎಲ್ಲಾ ಪನೀರ್ ಕ್ಯೂಬ್ಸ್ಗಳನ್ನು ಕಾಯಿಸಿಕೊಳ್ಳಿ.
* ನಂತರ ಅದನ್ನು ಎಣ್ಣೆಯಿಂದ ತೆಗೆದು ಅದರ ಮೇಲೆ ಸ್ವಲ್ಪ ಚಾಟ್ ಮಸಾಲ ಪುಡಿಯನ್ನು ಹಾಕಿಕೊಂಡು ಕೆಚಪ್ ಅಥವಾ ಗ್ರೀನ್ ಚಟ್ನಿಯೊಂದಿಗೆ ಬಿಸಿಬಿಸಿ ತಿನ್ನಲು ಕೊಡಿ