ಬೆಂಗಳೂರು: ಪ್ರಮಾಣೀಕೃತ ಕಟ್ಟಡ ವಾಸ್ತುಶಿಲ್ಪಿಗಳಿಗೆ ನಿವೇಶನಗಳ ಕಟ್ಟಡಗಳ ನಕ್ಷೆ ಸ್ವಯಂ ದೃಢೀಕರಿಸುವ ಅವಕಾಶ ನೀಡಲಾಗುವುದು. ಈ ವ್ಯವಸ್ಥೆ ಜಾರಿಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಮಾತನಾಡಿದ ಅವರು, ಪ್ರಮಾಣಿಕೃತ ಲೆಕ್ಕಪರಿಶೋಧಕರು ಇರುವಂತೆ, ಪ್ರಮಾಣೀಕೃತ ಕಟ್ಟಡ ವಾಸ್ತುಶಿಲ್ಪಿಗಳಿಗೆ ನಿವೇಶನಗಳ ಕಟ್ಟಡಗಳ ನಕ್ಷೆ ಸ್ವಯಂ ದೃಢೀಕರಿಸುವ ಅವಕಾಶ ನೀಡಲಾಗುವುದು.
How to Peel Ginger: ಸಿಂಪಲ್ ಟ್ರಿಕ್ಸ್ ಮೂಲಕ ಶುಂಠಿ ಸಿಪ್ಪೆ ಫಟಾಫಟ್ ಆಗಿ ಸುಲಿಯಬಹುದು..!
ಇದರಿಂದ ನಕ್ಷೆ ಮಂಜೂರಿಗೆ ಜನ ಪದೇ, ಪದೇ ಬಿಬಿಎಂಪಿಯ ಬಾಗಿಲು ತುಳಿಯುವುದು ತಪ್ಪುತ್ತದೆ. ಅಧಿಕಾರಿಗಳ ಕಿರುಕುಳ ಸೇರಿದಂತೆ ಕೆಲಸ ವಿಳಂಬವಾಗುವುದೂ ತಪ್ಪುತ್ತದೆ ಎಂದರು. ಈ ನೆಲದ ಕಾನೂನಿನ ಅರಿವಿರುವ ಕಟ್ಟಡ ವಾಸ್ತುಶಿಲ್ಪಿಗಳು ಸರ್ಕಾರದ ನಿರ್ಣಯಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಜನಸಾಮಾನ್ಯರು ಮನೆ ಕಟ್ಟಲು ಪರದಾಡುವ ಸ್ಥಿತಿ ಈ ಕಾನೂನಿನಿಂದ ಪರಿಹಾರವಾಗಲಿದೆ. ನೀವೆಲ್ಲಾ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೀರಿ ಎನ್ನುವ ನಂಬಿಕೆ ನನಗಿದೆ ಎಂದು ಹೇಳಿದರು.