ಬೆಂಗಳೂರು: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ಇರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
How to Peel Ginger: ಸಿಂಪಲ್ ಟ್ರಿಕ್ಸ್ ಮೂಲಕ ಶುಂಠಿ ಸಿಪ್ಪೆ ಫಟಾಫಟ್ ಆಗಿ ಸುಲಿಯಬಹುದು..!
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದೇ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಪೂಜೆ ಪುರಸ್ಕಾರಗಳು ನಡೆಯಲಿವೆ ಅಂದು, ಪೂಜೆಗೆ ಭಂಗ ಮಾಡಲ್ಲ. ಆದರೆ ಕಾನೂನು ವಿರೋಧಿ ಚಟುವಟಿಕೆ ನಡೆಯದಂತೆ ನೋಡಿಕೊಳ್ಳಲು ಹೇಳಿದ್ದೇವೆ ಎಂದರು.
ಇನ್ನು ಇದೇ ಸಂದರ್ಭದಲ್ಲಿ ಒಳಮೀಸಲಾತಿ ವಿಚಾರವಾಗಿ ಮಾತನಾಡಿ, ಈ ಹಿಂದೆ ಚಿತ್ರದುರ್ಗದಲ್ಲಿ ಒಳಮೀಸಲಾತಿಯನ್ನು ನೀಡುವ ನಿರ್ಣಯ ಮಾಡಿದ್ದೆವು. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿ ಮಂಡನೆ ಮಾಡುವ ಭರವಸೆ ಕೊಟ್ಟಿದ್ದೆವು ಎಂದು ವಿವರಿಸಿದರು.