ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ನಡೆಸಿರುವ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಮರ್ಥವಾಗಿ ನ್ಯಾಯಮಂಡಿಸಲು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನಲ್ಲಿ ದಾವೆ ಹೂಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2012ರಲ್ಲಿ ಶಾಸಕ ಅಭಯ ಪಾಟೀಲ ವಿರುದ್ಧ ಅಕ್ರಮವಾಗಿ ಆಸ್ತಿ ಕಬಳಿಕೆ ಮಾಡಿರುವ ಕುರಿತು ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ನ್ಯಾಯಾಲಯದಲ್ಲೂ ವಾದ ವಿವಾದ ನಡೆಯಿತು. ಲೋಕಾಯುಕ್ತ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅದು ರದ್ದಾಗಿತ್ತು. ಈಗ ಸುಪ್ರೀಂಕೋರ್ಟ್ ನಲ್ಲಿ ಮತ್ತೆ ಪ್ರಕರಣ ದಾಖಲಿಸಲಾಗಿದೆ ಎಂದರು.
ನಾನು ಯಾವುದೇ ವ್ಯಕ್ತಿಯ ವಿರುದ್ಧ ಹೋರಾಟ ನಡೆಸಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದೇನೆ. ಸುಪ್ರೀಂಕೋಟ್೯ ಲೋಕಾಯುಕ್ತರು ಶಾಸಕ ಅಭಯ ಪಾಟೀಲಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದರು.
ನ್ಯಾ. ನಿತಿನ್ ಬೋಳಬಂದಿ ಉಪಸ್ಥಿತರಿದ್ದರು.