ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪೂರದಲ್ಲಿ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಹಾಗೂ ಜಿಲ್ಲಾ ಲೀಡ್ ಬ್ಯಾಂಕ್ ನ ಸಹಯೋಗದಲ್ಲಿ ನಡೆದ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮ ನಡೆಯಿತು. ಶಾಸಕ ಸಿದ್ದು ಸವದಿ ಮಾತನಾಡಿ ಗಣ ಭಾರತ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಪ್ರಧಾನಮಂತ್ರಿ ಸ್ವ ನಿಧಿ ಯೋಜನೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಮುದ್ರಾ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ವಿಠ್ಠಲ್ ಬಿ ಗುರವ ಮಾತನಾಡಿ ಪ್ರಧಾನ ಮಂತ್ರಿ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನ್ ಜ್ಯೋತಿ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆಗಳ ಬಗ್ಗೆ ತಿಳುವಳಿಕೆ ನೀಡಿದರು. ಕೇಂದ್ರ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ ಮತ್ತು ಜನ- ದನ ಖಾತೆಯ ಬಗ್ಗೆ ತಿಳುವಳಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಬಸನಗೌಡ ಪಾಟೀಲ. ಸುರೇಶ್ ಅಕ್ಕಿವಾಟ. ಆನಂದ ಕಂಪು ಮಹಾಲಂಗ ಕುಲ್ಲೋಳಿ. ಜಿ ಎಸ್ ಗೊಂಬಿ. ಮನೋಹರ್ ಶಿರೋಳ್, ಅಶೋಕಗೌಡ ಪಾಟೀಲ. ಶೇಖರ ಅಂಗಡಿ. ಬಸವರಾಜ ಹಿಟ್ಟಿನಮಠ, ರಾಜು ಚಮಕೇರಿ. ರವಿ ಜವಳಗಿ ಹನಮಂತ ಕೊಳೆನ್ನವರ(Manager KVGB). ಅವಿನಾಶ್ ದಾಸರವಾರ (Asst Manager Canara Bank)
ಚೇತನ್ ಪಿ ಚವಾಣ್ (Asst Manager IOB) ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಕಾಶ ಕುಂಬಾರ
ಬಾಗಲಕೋಟೆ