ಹೈದರಾಬಾದ್: ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳು ನಡೆದಿವೆ. ಈ ಹೊತ್ತಿನಲ್ಲಿ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ (ISRO), ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರವನ್ನು ಬಿಡುಗಡೆ ಮಾಡಿದೆ. ಆಕಾಶದಿಂದ ಅಯೋಧ್ಯೆಯ ರಾಮಮಂದಿರ ಹೇಗೆ ಕಾಣುತ್ತದೆ ಎಂಬ ಚಿತ್ರವನ್ನು ಹೈದರಾಬಾದ್ನ ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ಬಿಡುಗಡೆ ಮಾಡಿದೆ.
ಈ ಚಿತ್ರಗಳನ್ನು ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹದಿಂದ ತೆಗೆಯಲಾಗಿದೆ. ಇದರಲ್ಲಿ ದಶರಥ ಮಹಲ್, ಅಯೋಧ್ಯೆಯ ರೈಲು ನಿಲ್ದಾಣ ಮತ್ತು ಪವಿತ್ರ ಸರಯೂ ನದಿ ಕಾಣಿಸುತ್ತದೆ. ಇಂಡಿಯನ್ ರಿಮೋಟ್ ಸೆನ್ಸಿಂಗ್ ಸಿರೀಸ್ ಉಪಗ್ರಹದ ಮೂಲಕ ತೆಗೆದ ಈ ಚಿತ್ರಗಳಲ್ಲಿ 2.7 ಎಕರೆ ಇರುವ ಪವಿತ್ರ ರಾಮಮಂದಿರ ಸಂಕೀರ್ಣವು ನಮಗೆ ಕಾಣುತ್ತದೆ.
Buttermilk: ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನವಿದೆ ನೋಡಿ..!
ಸೋಮವಾರ (ಜ.22) ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆ ಸಂಪೂರ್ಣವಾಗಿ ಸಿಂಗಾರಗೊಂಡಿದೆ. ಈ ಸಮಾರಂಭದಿಂದ ದೇಶದೆಲ್ಲೆಡೆ ಹಬ್ಬದ ವಾತಾವರಣ ಮನೆಮಾಡಿದೆ. ಜನ ತಮ್ಮ ಸುತ್ತಮುತ್ತಲಿನ ದೇವಾಲಯಗಳು ಸೇರಿದಂತೆ, ಮನೆಯಲ್ಲೂ ಈ ಸಮಾರಂಭವನ್ನು ದೀಪಾವಳಿಯಂತೆ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.