ಬೆಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವನನ್ನು ಅರೆಸ್ಟ್ ಮಾಡಿದ್ದಾರೆ. ಶಶಾಂಕ್(26) ಬಂಧಿತ ಆರೋಪಿಯಾಗಿದ್ದು, ಶಶಾಂಕ್ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದ. ಸಮಾಜದಲ್ಲಿ ಭಯಭೀತ ವಾತಾವರಣ ಸೃಷ್ಟಿ ಮಾಡ್ತಿದ್ದ. ಹೀಗಾಗಿ ಸಿಸಿಬಿ ಪೊಲೀಸರು ಶಶಾಂಕ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Buttermilk: ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನವಿದೆ ನೋಡಿ..!
ವಿಚಾರಣೆ ವೇಳೆ ಈತನ ಮೇಲೆ 7 ಪ್ರಕರಣಗಳು ದಾಖಲಾಗಿರೋದು ಬೆಳಕಿಗೆ ಬಂದಿದೆ. 2015 ರಲ್ಲಿ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಕೇಸ್, 2019ರಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ರಾಜಾಜಿನಗರ, ತಿಲಕನಗರದಲ್ಲಿ ಒಂದೊಂದು ಕೊಲೆ ಯತ್ನ ಕೇಸ್, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಹಾಗೂ ಕೊಲೆಯತ್ನ ಕೇಸ್, ಪುಟ್ಟರೆನಹಳ್ಳಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಶಶಾಂಕ್ ವಿರುದ್ಧ ಇರೋದು ಬೆಳಕಿಗೆ ಬಂದಿದೆ.