ದಾವಣಗೆರೆ:- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ನೀಡಲು ದಾವಣಗೆರೆಯಲ್ಲಿ ನಾಣ್ಯಗಳಲ್ಲಿ ಅಯೋಧ್ಯೆ ರಾಮ ಮಂದಿರ ಸಿದ್ಧಪಡಿಸಲಾಗಿದೆ.
ಹರಿಹರ ನಗರದ ಆಕಾರ-ಆಧಾರ ಸಂಸ್ಥೆಯ ರಾಮು ಎಂ ಹಾಗೂ ಮಕ್ಕಳು ಸೇರಿಕೊಂಡು ಒಂದು, ಎರಡು, ಐದು, 10, 20 ರೂಪಾಯಿ ಮೌಲ್ಯದ ಒಟ್ಟು 12 ಸಾವಿರ ನಾಣ್ಯ ಬಳಸಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದ್ದಾರೆ. ಒಟ್ಟು 31,500 ರೂಪಾಯಿ ವೆಚ್ಚದಲ್ಲಿ 30 ದಿನಗಳಲ್ಲಿ ಈ ಮಂದಿರವನ್ನು ಸಿದ್ಧಪಡಿಸಲಾಗಿದೆ. ನಾಳೆ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ನಾಣ್ಯಗಳಿಂದ ಸಿದ್ಧವಾದ ಮಂದಿರವನ್ನು ಹುಬ್ಬಳ್ಳಿಯಲ್ಲಿ ಪ್ರದರ್ಶನಕ್ಕಿಡಲಾಗುತ್ತಿದೆ.