ರಾಮಮಂದಿರ ಉದ್ಘಾಟನೆಯಂದು ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದರೆ, ಇಂದು ನಿಮಗೆ ಶುಭಸುದ್ದಿ ಸಿಗುವುದು ಖಂಡಿತ.
ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಚಿನ್ನದ ದರ ತಟಸ್ಥವಾಗಿದ್ದರೆ ಬೆಳ್ಳಿ ದರ ಕೊಂಚ ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ದರ
ಇಂದು 1 ಗ್ರಾಂ ಚಿನ್ನದ ಬೆಲೆ 5,780ರೂ ಇದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 46,240 ರೂ. ನೀಡಬೇಕು. ಇಂದಿನ 10 ಗ್ರಾಂ ಚಿನ್ನದ ಬೆಲೆ 57,800 ಆಗಿದ್ದರೆ, 100 ಗ್ರಾಂ ಚಿನ್ನದ ಬೆಲೆ 5,78,000 ರೂ. ಇದೆ.
24 ಕ್ಯಾರೆಟ್ ಚಿನ್ನದ ದರ
1 ಗ್ರಾಂ 24 ಕ್ಯಾರೆಟ್ ಚಿನ್ನಕ್ಕೆ ಇಂದು 6,305 ಇದೆ. 8 ಗ್ರಾಂ ಚಿನ್ನಕ್ಕೆ ಇಂದು 50,440 ರೂ ನೀಡಬೇಕು. 10 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 63,050 ರೂ. ಕೊಡಬೇಕು. ಇವತ್ತು 100 ಗ್ರಾಂ ಚಿನ್ನದ ದರ 6,30,500 ರೂ. ಇದೆ.
ಕರ್ನಾಟಕದಲ್ಲಿ ಇಂದಿನ ಚಿನ್ನದ ದರ
ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 57,800 ರೂ ಇದ್ದರೆ, 24 ಕ್ಯಾರೆಟ್ಗೆ 60,050 ರೂ. ಇದೆ. ಆದರೆ ಮಜೂರಿ, ಇತರೆ ಶುಲ್ಕ ಹಾಗೂ ಇತ್ಯಾದಿ ದರಗಳು ವಿವಿಧ ನಗರಗಳಲ್ಲಿ ವ್ಯತ್ಯಾಸವಿರಬಹುದು.