ಅಯೋಧ್ಯೆ: ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.
ರಾಮಲಲ್ಲಾಗೆ ಮೊದಲ ಮಜ್ಜನ: ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ
ಅಯೋಧ್ಯೆಯಲ್ಲಿಂದು ಮೋದಿ:
ಬೆಳಗ್ಗೆ 10.25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮನ
ಬೆಳಗ್ಗೆ 10.55: ರಾಮಜನ್ಮಭೂಮಿ ಆವರಣ ತಲುಪಲಿರುವ ಹೆಲಿಕಾಪ್ಟರ್
ಬೆಳಗ್ಗೆ 11 ರಿಂದ ಮಧ್ಯಾಹ್ನ 12: ರಾಮಮಂದಿರದ ವೀಕ್ಷಣೆ ಮಾಡಲಿರುವ ಪ್ರಧಾನಿ
ಮಧ್ಯಾಹ್ನ 12.05-12.55: ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಿರುವ ಮೋದಿ. ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿ.
ಮಧ್ಯಾಹ್ನ 1-2: ನರೇಂದ್ರ ಮೋದಿ, ಮೋಹನ್ ಭಾಗವತ್, ಯೋಗಿ ಆದಿತ್ಯನಾಥ್ ಸಾರ್ವಜನಿಕ ಭಾಷಣ
ಮಧ್ಯಾಹ್ನ 2.10: ರಾಮಜನ್ಮಭೂಮಿ ಆವರಣದಲ್ಲಿರುವ ಶಿವ ಮಂದಿರಕ್ಕೆ ಭೇಟಿ, ವಿಶೇಷ ಪ್ರಾರ್ಥನೆ
ಮಧ್ಯಾಹ್ನ 3.30: ಅಯೋಧ್ಯೆಯಿಂದ ಪ್ರಧಾನಿ ನಿರ್ಗಮನ