ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್ ಆಟಗಾರ ಸಾವನ್ನಪ್ಪಿರುವ ಘಟನೆ ರಾಮಮೂರ್ತಿ ನಗರ ಫ್ಲೈ ಓವರ್ ಮೇಲೆ ನಿನ್ನೆ ರಾತ್ತಿ ನಡೆದಿದೆ.
ಮೊನೀಶ್ ಅವರು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಆರ್. ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಾಬುಸಾಪಾಳ್ಯ ನಿವಾಸಿಯಾಗಿದ್ದ ಮೊನೀಶ್ ಪರಿಕ್ರಮ ಎಫ್.ಸಿ, ಡೆಕ್ಕನ್ ಎಫ್.ಸಿ, ಯಂಗ್ ಚಾಲೆಂಜರ್ಸ್ ಎಫ್.ಸಿ ಸೇರಿದಂತೆ ವಿವಿಧ ಕ್ಲಬ್ಗಳ ಪರ ಕಣಕ್ಕಿಳಿದಿದ್ದರು. ಪ್ರಸ್ತುತ ಬೆಂಗಳೂರು ಡಿಸ್ಟ್ರಿಕ್ಟ್ ಫುಟ್ಬಾಲ್ ಅಸೋಸಿಯೇಷನ್ (ಬಿಡಿಎಫ್ಎ) ಎ ಡಿವಿಷನ್ ಲೀಗ್ ಚಾಂಪಿಯನ್ಶಿಪ್ನಲ್ಲಿ ಬೆಂಗಳೂರು ಈಗಲ್ಸ್ ಎಫ್.ಸಿ ಪರ ಆಡುತ್ತಿದ್ದರು.