ಅಯೋಧ್ಯೆ: ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ.
Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!
ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಮೋದಿ ಹೇಳಿದರು.