ಉಗಾಂಡಾ: ವಿದೇಶಾಂಗ ಸಚಿವ ಎಸ್. ಜೈಶಂಕರ್ (Jai Shankar) ಅವರು ಉಗಾಂಡಾದ (Uganda) ಕಂಪಾಲಾದಲ್ಲಿ ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ (Ranil Wickremesinghe) ಮತ್ತು ಪ್ಯಾಲೆಸ್ತೀನ್ ವಿದೇಶಾಂಗ ಸಚಿವ ಡಾ.ರಿಯಾದ್ ಅಲ್-ಮಲಿಕಿ (Riyad al-Maliki) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲಿಪ್ತ ಚಳವಳಿಯ (NAM) ಎರಡು ದಿನಗಳ ಶೃಂಗಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಜೈಶಂಕರ್ ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿದ್ದಾರೆ.
Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!
ಈ ಕುರಿತು ತಮ್ಮ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿರುವ ಜೈಶಂಕರ್ ಅವರು, ಡಾ. ರಿಯಾದ್ ಅಲ್-ಮಲಿಕಿ ಅವರನ್ನು ಭೇಟಿಯಾಗಲು ಸಂತೋಷವಾಯಿತು ಎಂದಿದ್ದಾರೆ. ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಅವರೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು.
ಅವರು ಕೂಡ ಸಂಘರ್ಷದ ಮಾನವೀಯ ಮತ್ತು ರಾಜಕೀಯ ಆಯಾಮಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಮಾನವೀಯ ಬಿಕ್ಕಟ್ಟಿನಿಂದ ಜರ್ಜರಿತವಾಗಿರುವ ಗಾಜಾಕ್ಕೆ ಸೂಕ್ತ ಪರಿಹಾರ ಕ್ರಮದ ಅಗತ್ಯವಿದ್ದು, ಇದು ಯುದ್ಧ ಸಂತ್ರಸ್ತರಿಗೆ ತಕ್ಷಣದ ಪರಿಹಾರ ನೀಡುವಂತಿರಬೇಕು ಎಂದು ಜೈಶಂಕರ್ ತಿಳಿಸಿದ್ದಾರೆ.