ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ. ಐದು ಟೆಸ್ಟ್ಗಳ ಸರಣಿಯ ಮೊದಲ ಪಂದ್ಯ ಜನವರಿ 25ರಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುರುವಾಗಲಿದ್ದು,
ವೈಯಕ್ತಿಕ ಕಾರಣದಿಂದ ಕೊಹ್ಲಿ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಗಳ ಮೂಲಕ ತಿಳಿದು ಬಂದಿದೆ. ಭಾರತ ತಂಡದಿಂದ ಬಿಡುಗಡೆ ಮಾಡುವಂತೆ ವಿರಾಟ್ ಕೊಹ್ಲಿ ಬಿಸಿಸಿಐ ಎದುರು ಮನವಿ ಮಾಡಿಕೊಂಡಿದ್ದಾರೆ ಎಂದು ಬೆಳವಣಿಗೆಗೆ ಹತ್ತಿರದ ಮೂಲಗಳು ತಿಳಿಸಿವೆ.
Ram Mandir: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಬಾಲರಾಮ: ಹಿಂದೂಗಳ ಕನಸು ನನಸು!
“ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ವಿರಾಟ್ ಕೊಹ್ಲಿ ಮನವಿ ಮಾಡಿದ್ದು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ವೈಯಕ್ತಿಕ ಕಾರಣ ಕೊಟ್ಟು ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ,” ಎಂದು ಮೂಲಗಳು ಮಾಹಿತಿ ನೀಡಿವೆ. ಟೀಮ್ ಇಂಡಿಯಾ ಪರ ಆಡುವುದಕ್ಕೆ ಮೊದಲ ಆದ್ಯತೆ ನೀಡುವ ವಿರಾಟ್ ಕೊಹ್ಲಿ,
ಇದೀಗ ಅನಿವಾರ್ಯ ಕಾರಣದಿಂದಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ 2 ಪಂದ್ಯಗಳಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಮತ್ತು ಟೀಮ್ ಮ್ಯಾನೇಜ್ಮೆಂಟ್ಗೆ ವಿಚಾರ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.