ಬೆಂಗಳೂರು:- ಇಂದು ಬೆಂಗಳೂರಿನ ಒಟ್ಟು 117 ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿ ಮರು ಪರೀಕ್ಷೆಯು ನಡೆಯಲಿದೆ
ಈ ಹಿನ್ನೆಲ್ಲಿ ಈ ಬಾರಿ ಯಾವುದೇ ಅಕ್ರಮಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ 117 ಕೇಂದ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲು ಆದೇಶದಲ್ಲಿ ಸೂಚಿಸಿದ್ದಾರೆ. ಈ ಹಿಂದೆ ನಡೆದ ಘಟನೆಗಳು ಮರುಕಳಿಸಬಾರದೆಂದು ಈ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಗಾಗಲೇ ಸೂಚಿಸಿರುವಂತೆ ಅಭ್ಯರ್ಥಿಗಳು ವಸ್ತ್ರಸಂಹಿತೆಯನ್ನು ಪಾಲಿಸಬೇಕೆಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಅವರು ತಿಳಿಸಿದ್ದಾರೆ.