ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ತಡರಾತ್ರಿವರೆಗೂ ಪಾರ್ಟಿಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಯಲ್ ಅಡಿಲೇಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ವಿಚಾರಣೆ ಆರಂಭಿಸಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಗ್ಲೆನ್ ಮ್ಯಾಕ್ಸ್ವೆಲ್ ಆಸ್ಟ್ರೇಲಿಯಾ ತಂಡ ಸೇರಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗದ ಅವರು ಸೀಮಿತ ಓವರ್ಗಳ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಯು ಫೆಬ್ರವರಿ 9ರಂದು ಶುರುವಾಗಲಿದೆ. ಇದೇ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಹಿನ್ನೆಲೆಯಲ್ಲಿ ಆಸೀಸ್ಗೆ ಈ ಟಿ20 ಸರಣಿ ಅತ್ಯಂತ ಮಹತ್ವದ್ದಾಗಿದೆ.
ವರದಿಗಳ ಪ್ರಕಾರ ಅಡಿಲೇಡ್ನಲ್ಲಿ ನಡೆದ ಕಾನ್ಸರ್ಟ್ ಒಂದರಲ್ಲಿ ಪಾಲ್ಗೊಂಡಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಚೆನ್ನಾಗಿ ಕುಡಿದಿದ್ದಾರೆ. ಬಳಿಕ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡದ ಕೆಲ ಆಟಗಾರರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಅಂದಹಾಗೆ ಮ್ಯಾಕ್ಸ್ವೆಲ್ ಆಸ್ಪತ್ರೆಗೆ ದಾಖಲಾಗಲು ಇದ್ದ ಸರಿಯಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ.