ಬೆಳಗಾವಿ: ನನಗೆ ಸ್ಪರ್ಧೆ ಮಾಡುವಂತೆ ಹೈಕಮಾಂಡ್ನ ಯಾವ ನಾಯಕರೂ ಸೂಚಿಸಿಲ್ಲ. ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವುದು ಕಡ್ಡಾಯವಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಮ್ಮ ಸ್ಪರ್ಧೆಗೆ ಹೈಕಮಾಂಡ್ನಿಂದ ಒತ್ತಡ ಬರುತ್ತಿರುವ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ನನಗೇನೂ ಸೂಚನೆ ನೀಡಿಲ್ಲ ಎಂದು ಹೇಳಿದರು.
Sleeping Tip: 6 ಗಂಟೆಗಿಂತ ಕಡಿಮೆ ನಿದ್ದೆ ಮಾಡ್ತೀರಾ..?! ವಕ್ಕರಿಸಿಬಿಟ್ಟೀತು ಈ ಮಾರಣಾಂತಿಕ ಖಾಯಿಲೆ ಹುಷಾರ್!
ರಾಜ್ಯದಲ್ಲಿ 18 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧ್ಯವಿಲ್ಲ. ಕೆಲ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ವೀಕ್ ಇದೆ. 28ರ ಪೈಕಿ 20 ಕ್ಷೇತ್ರಗಳಲ್ಲಿ ನಾವು ಪ್ರಬಲರಾಗಿದ್ದೇವೆ. 8 ಕ್ಷೇತ್ರಗಳಲ್ಲಿ ವೀಕ್ ಇದ್ದೇವೆ. ತಮ್ಮ ಅಭ್ಯರ್ಥಿ ಗೆಲುವಿಗೆ ಎಲ್ಲ ಸಚಿವರೂ ಪ್ರಯತ್ನ ಮಾಡುತ್ತಾರೆ.
ನಮ್ಮ ಸಚಿವರ ಪ್ರಯತ್ನದ ನಂತರವೂ ಕೆಲವೊಮ್ಮೆ ಫಲ ಸಿಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಚಿವರ ತಲೆದಂಡವಾಗುತ್ತದೆ ಎಂಬುದು ಶುದ್ಧ ಸುಳ್ಳು. ಈ ರೀತಿ ಹೈಕಮಾಂಡ್ ಯಾರಿಗೂ ಸೂಚಿಸಿಲ್ಲ, ಇದು ಕೇವಲ ಊಹಾಪೋಹವಷ್ಟೇ ಎಂದು ಹೇಳಿದರು.