ಚಾಮರಾಜನಗರ: ಅಸ್ಸಾಂನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿಗೆ ಹಲ್ಲೆ ಯತ್ನ ಬಿಜೆಪಿ ವಿರುದ್ದ ಗಡಿ ಜಿಲ್ಲೆ ಚಾಮರಾಜನರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ ಸಮಾವೇಶಗೊಂಡ ಪ್ರತಿಭನಾಕಾರರು, ಭುವನೇಶ್ವರಿ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ 209 ತಡೆದು ಬೃಹತ್ ಮಾನವ ಸರಪಳಿ ನಿರ್ಮಿಸಿ ರಸ್ತೆಯಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು.
ಈ ವೇಳೆ ಅಸ್ಸಾಂ ರಾಜ್ಯದ ಬಿಜೆಪಿ ಕಾರ್ಯಕರ್ತರ ವಿರುದ್ದ ಅಕ್ರೋಶ ಹೊರ ಹಾಕಿದರು ಅಸ್ಸಾಂನಲ್ಲಿ ಕಾಂಗ್ರೆಸ್ಸಿಗರು ಶಾಂತಿಯುತವಾಗಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಳ್ಗೊಂಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರ ವಿರುದ್ದ ಆಕ್ರೋಶ ಹೊರ ಹಾಕಿದರು. ಕೂಡಲೆ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುವಂತೆ ಪ್ರತಿಭಟನಾಕಾರರ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಮಹಮ್ಮದ್ ಹಜ್ಗರ್ ಮುನ್ನಾ, ಗುರುಸ್ವಾಮಿ, ಹೆಚ್ ವಿ. ಚಂದ್ರು, ತೋಟೋಶ್ ಉಪಾಧ್ಯಕ್ಷರಾದ ಬಿ.ಕೆ. ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್ ಆರ್. ಮಹದೇವ್ , ಚಾಮರಾಜನಗರ ಲೋಕಸಭಾ ಟಿಕೆಟ್ ಆಕಾಂಕ್ಷಿ ಡಿ.ಎನ್. ನಟರಾಜ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಿದರು.