ಮಿಜೋರಾಂ: ಮ್ಯಾನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನವು ಮಿಜೋರಾಂನ ಲೆಂಗ್ಪುಯಿ ಏರ್ಪೋರ್ಟ್ನಲ್ಲಿ ರನ್ವೇಯಿಂದ ಸ್ಕಿಡ್ ಆಗಿದೆ. ಘಟನೆಯಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ.
ಮಂಗಳವಾರ ಮಿಜೋರಾಂನ ಲೆಂಗ್ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮೊದಲು ಅಂದರೆ ಬೆಳಗ್ಗೆ 10.19 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆ ನಡೆದ ವೇಳೆ ವಿಮಾನದಲ್ಲಿ ಒಟ್ಟು 14 ಮಂದಿ ಇದ್ದರು ಎನ್ನಲಾಗಿದೆ.
ಈ ಸಂಬಂಧ ಮಿಜೋರಾಂ ಡಿಜಿಪಿ ಅನಿಲ್ ಶುಕ್ಲಾ ಪ್ರತಿಕ್ರಿಯಿಸಿ, ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದ 8 ಮಂದಿ ಸುರಕ್ಷಿತವಾಗಿದ್ದಾರೆ. ಇವರನ್ನು ಲೆಂಗಪುಯಿನಲ್ಲಿರುವ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.