ಗದಗ: ಅಸ್ಸಾಂ ನಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಬಿಜೆಪಿ ಕಾರ್ಯಕರ್ತರ ಅನುಚಿತ ವರ್ತನೆ ಖಂಡಿಸಿ ಗದಗ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಯಿತು. ಗದಗ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದ್ದು,
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ ಎಸ್ ಪಾಟೀಲ್ ನೇತೃತ್ವದಲ್ಲಿ ಕೆಂದ್ರ ಸರ್ಕಾರ ಹಾಗೂ ಬಿಜೆಪಿ ವಿರುಧ್ಧ ವಾಗ್ದಾಳಿ ನಡೆಸಿದರು. ಮಾಜಿ ಶಾಸಕ ಡಿ ಆರ್ ಪಾಟೀಲ್, ಬಿ ಆರ್ ಯಾವಗಲ್ ಸೇರಿದಂತೆ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.